ಕೆ-ಸೆಟ್ 2024 ಪರೀಕ್ಷೆ ಫಲಿತಾಂಶ ಪ್ರಕಟ

 ಕೆ-ಸೆಟ್ 2024 ಪರೀಕ್ಷೆಗೆ ಸಂಬಂಧಿಸಿದಂತೆ 41 ವಿಷಯಗಳಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ  ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.


ಫಲಿತಾಂಶ ಕುರಿತು ಆಕ್ಷೇಪಣೆಗಳು ಇದ್ದಲ್ಲಿ ಡಿ.19ರ ಮಧ್ಯಾಹ್ನ 12.30ರೊಳಗೆ ಪೂರಕ ದಾಖಲೆಗಳೊಂದಿಗೆ ಆನ್‌ಲೈನ್‌ನಲ್ಲಿ ಸಲ್ಲಿಸಲು ಕೋರಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಎಲ್ಲ ಅಭ್ಯರ್ಥಿಗಳ ವಿಷಯವಾರು ತಾತ್ಕಾಲಿಕ ಅಂಕಪಟ್ಟಿ ಫಲಿತಾಂಶವನ್ನು ಮೇಲಿನ ವಿಧಾನದಲ್ಲಿ https://cetonline.karnataka.gov.in/kea/kset2024 ವೆಬ್‌ಪೇಜ್‌ನಲ್ಲಿ 'KSET 2024 ಫಲಿತಾಂಶ ಪಟ್ಟಿ' ಎಂದಿರುವ ಲಿಂಕ್‌ ಕ್ಲಿಕ್ ಮಾಡಿ, ನೋಡಬಹುದು.

ಕೆಇಎ ವೆಬ್‌ಸೈಟ್‌ https://cetonline.karnataka.gov.in/kea/ ಗೆ ಭೇಟಿ ನೀಡಿ.


Post a Comment

0 Comments