ಡಿ.28-29ರಂದು 8ನೇ ವರ್ಷದ ಮಂಗಳೂರು ಕಂಬಳ

ಮಂಗಳೂರಿನ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.28 ರಂದು 8ನೇ ವರ್ಷದ 'ಮಂಗಳೂರು ಕಂಬಳ' ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

28ರಂದು ಬೆಳಿಗ್ಗೆ 8.30ಕ್ಕೆ ದಿ. ರತ್ನ ಮಾಧವ ಶೆಟ್ಟಿ ವೇದಿಕೆಯಲ್ಲಿ ಸಭಾಕಾರ್ಯಕ್ರಮ ನಡೆಯಲಿದ್ದು, ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರ ತಂದೆ, ಎಂಆರ್‌ಪಿಎಲ್‌ನ ನಿವೃತ್ತ ಆಡಳಿತ ನಿರ್ದೇಶಕರಾದ ಎಂ.ವೆಂಕಟೇಶ್‌ ಕಂಬಳ ಉದ್ಘಾಟಿಸಲಿದ್ದಾರೆ.ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್‌ ಕಾರ್ಣಿಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷ ಕೆ. ಚಿತ್ತರಂಜನ್‌ ಅವರು ದೀಪ ಪ್ರಜ್ವಲನೆ ನೆರವೇರಿಸಲಿದ್ದು, ಮಂಗಳೂರಿನ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಶ್ರೀ ಜಿತಕಾಮಾನಂದ ಜೀ, ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಕೊಂಡೆವೂರು ಮಠದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ , ಶ್ರೀ ಕಟೀಲು ದೇವಳದ ಅರ್ಚಕ‌ ಅನಂತ ಪದ್ಮನಾಭ ಅಸ್ರಣ್ಣ ಸೇರಿ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸುತ್ತಾರೆ' ಎಂದು ಹೇಳಿದರು.

Post a Comment

0 Comments