43 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಕುವೈತ್ ಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2024ರ ಡಿಸೆಂಬರ್ 21-22 ರಂದು ಕುವೈತ್'ಗೆ ಭೇಟಿ ನೀಡಲಿದ್ದಾರೆ.
ಈ ತಿಂಗಳ ಆರಂಭದಲ್ಲಿ ಪ್ರಧಾನಿ ಮೋದಿ ಅವರು ಕುವೈತ್ ವಿದೇಶಾಂಗ ಸಚಿವ ಅಬ್ದುಲ್ಲಾ ಅಲಿ ಅಲ್-ಯಾಹ್ಯಾ ಅವರನ್ನ ಭೇಟಿ ಮಾಡಿದ್ದರು. ನ್ಯೂಯಾರ್ಕ್'ನಲ್ಲಿ ಸೆಪ್ಟೆಂಬರ್'ನಲ್ಲಿ ಕುವೈತ್'ನ ಯುವರಾಜರೊಂದಿಗಿನ ತಮ್ಮ ಭೇಟಿಯನ್ನು ಸ್ಮರಿಸಿದ ಪ್ರಧಾನಮಂತ್ರಿಯವರು, ದ್ವಿಪಕ್ಷೀಯ ಸಂಬಂಧಗಳಲ್ಲಿ ಹೆಚ್ಚುತ್ತಿರುವ ಆವೇಗದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.
ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಸಂಸ್ಕೃತಿ ಮತ್ತು ಜನರ ನಡುವಿನ ಬಲವಾದ ಸಂಬಂಧಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಕ್ರಮಗಳ ಬಗ್ಗೆ ಅವರು ಚರ್ಚಿಸಿದರು. ತಮ್ಮ ಸಂಭಾಷಣೆಯ ವೇಳೆ ಪ್ರಧಾನಮಂತ್ರಿಯವರು, ಕುವೈತ್ ನಲ್ಲಿ ವಾಸಿಸುತ್ತಿರುವ ಒಂದು ಮಿಲಿಯನ್ ಭಾರತೀಯ ಸಮುದಾಯದ ಬಗ್ಗೆ ಕಾಳಜಿ ವಹಿಸಿದ್ದಕ್ಕಾಗಿ ಕುವೈತ್ ನಾಯಕತ್ವಕ್ಕೆ ಧನ್ಯವಾದ ಅರ್ಪಿಸಿದರು.
0 Comments