ಶೀಘ್ರದಲ್ಲಿ ಧರ್ಮಸ್ಥಳ, ಕೊಡಗು, ಚಿಕ್ಕಮಗಳೂರಿನಲ್ಲಿ ಮಿನಿ ವಿಮಾನ ನಿಲ್ದಾಣ

ಧರ್ಮಸ್ಥಳ, ಕೊಡಗು, ಚಿಕ್ಕಮಗಳೂರಿನಲ್ಲಿ ಮಿನಿ ವಿಮಾನ ನಿಲ್ದಾಣಕ್ಕೆ ಸರ್ಕಾರ ಮಹತ್ವದ ಯೋಜನೆ ರೂಪಿಸಿದೆ.


ಪ್ರವಾಸೋದ್ಯಮ, ಕೈಗಾರಿಕೆ ಅಭಿವೃದ್ಧಿ, ನೈಸರ್ಗಿಕ ವಿಕೋಪದ ಸಂದರ್ಭದಲ್ಲಿ ತುರ್ತು ಸ್ಪಂದನೆ ಉದ್ದೇಶದಿಂದ ವಿಮಾನ ನಿಲ್ದಾಣಗಳು ಇಲ್ಲದ ಜಿಲ್ಲೆಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಏರ್ ಸ್ಟ್ರಿಪ್ ನಿರ್ಮಾಣಕ್ಕೆ ಕ್ರಮ ಕೈಗೊಂಡಿದೆ.

 ಕೊಡಗು, ಚಿಕ್ಕಮಗಳೂರು ಮತ್ತು ಧರ್ಮಸ್ಥಳದಲ್ಲಿ ಏರ್‌ಸ್ಟ್ರಿಪ್‌ ನಿರ್ಮಾಣಕ್ಕೆ ನಿರ್ಧರಿಸಿ, ಅದಕ್ಕೆ ಅಗತ್ಯವಿರುವ ಭೂಮಿ ಗುರುತು ಸೇರಿದಂತೆ ಇನ್ನಿತರ ಪೂರ್ವಸಿದ್ಧತಾ ಕಾರ್ಯಗಳನ್ನು ಮಾಡಲಾಗುತ್ತಿದೆ. ಮೂಲಸೌಕರ್ಯ ಇಲಾಖೆ ನೀಡಿರುವ ಮಾಹಿತಿಯಂತೆ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆ ವ್ಯಾಪ್ತಿಯಲ್ಲಿ ಈಗಾಗಲೇ ಅಗತ್ಯ ಭೂಮಿ ಗುರುತಿಸಲಾಗಿದ್ದು, ಧರ್ಮಸ್ಥಳ ಸಮೀಪದಲ್ಲಿ ಸೂಕ್ತ ಜಾಗ ಸಿಗದೆ ಹುಡುಕಾಟ ನಡೆಸಲಾಗುತ್ತಿದೆ.

Post a Comment

0 Comments