ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯೂ ಒಂದು. ಈ ಯೋಜನೆಯಡಿ ಸಾಲ ಸೌಲಭ್ಯ ಪಡೆಯುವುದು ಹೇಗೆ ಎಂಬ ವಿವರ ಇಲ್ಲಿದೆ ನೋಡಿ.
ಕೇಂದ್ರ ಸರ್ಕಾರ ಕಳೆದ ವರ್ಷ ಈ ಯೋಜನೆಗೆ ಚಾಲನೆ ನೀಡಿತ್ತು. ಈ ಯೋಜನೆಯಡಿಯಲ್ಲಿ 5% ಬಡ್ಡಿದರದಲ್ಲಿ 3 ಲಕ್ಷ ರೂ.ವರೆಗೆ ಸಾಲ ಸೌಲಭ್ಯ ಪಡೆಯಬಹುದಾಗಿದೆ.
ಯಾರು ಅರ್ಹರು ?
ಬಡಿಗ, ದೋಣಿ ತಯಾರಕರು, ಕುಂಬಾರರು, ಮೀನಿನ ಬಲೆ ತಯಾರಕರು, ಅಕ್ಕಸಾಲಿಗರು, ಶಿಲ್ಪಿಗಳು, ಕ್ಷೌರಿಕರು, ರಾಜಮೇಸ್ತ್ರಿಗಳು ಸೇರಿದಂತೆ 18 ಬಗೆಯ ಕುಶಲ ಕರ್ಮಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸ್ವಂತ ಉದ್ಯೋಗ ಅಥವಾ ಉದ್ದಿಮೆ ಸ್ಥಾಪಿಸಲು ಈ ಯೋಜನೆ ಸಹಾಯ ಮಾಡುತ್ತದೆ.
- ಭಾರತ ಪ್ರಜೆಯಾಗಿರಬೇಕು.
- ವಯಸ್ಸು 18 ವರ್ಷದಿಂದ 50 ವರ್ಷಗಳ ನಡುವೆ ಇರಬೇಕು.
- ಯೋಜನೆಯಲ್ಲಿ ಒಳಗೊಂಡಿರುವ 18 ವರ್ಗದ ಯಾವುದಾದರೂ ಒಂದು ಉದ್ಯಮದಲ್ಲಿ ತೊಡಗಿಸಿಕೊಂಡಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ ?
ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ https://pmvishwakarma.gov.in/ ಗೆ ಹೋಗಿ. ಇಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇಲ್ಲಿ ಕೇಳುವ ಮಾಹಿತಿಗಳನ್ನು ಭರ್ತಿ ಮಾಡಬೇಕಾಗುತ್ತದೆ.
ಯಾವೆಲ್ಲಾ ದಾಖಲೆ ಬೇಕು ?
ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಆದಾಯ ಪ್ರಮಾಣ ಪತ್ರ, ಗುರುತಿನ ಚೀಟಿ, ಬ್ಯಾಂಕ್ ಪಾಸ್ ಬುಕ್ ವಿವರ, ವಾಸಸ್ಥಳ ದೃಢೀಕರಣ ಪತ್ರಗಳನ್ನು ಹೊಂದಿರಬೇಕು. ಭಾರತೀಯ ಪ್ರಜೆಯಾಗಿ 18 ರಿಂದ 50 ವರ್ಷದೊಳಗಿನ ಕುಶಲ ಕರ್ಮಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಇದೀಗ ಪಿಎಂ ವಿಶ್ವಕರ್ಮ ಯೋಜನೆಯಡಿ 1,751 ಕೋಟಿ ರೂ. ಸಾಲವನ್ನು ಬಿಡುಗಡೆ ಮಾಡಲಾಗಿದ್ದು, ಈ ಯೋಜನೆಯಡಿ ಕುಶಲಕರ್ಮಿಗಳು 5% ಬಡ್ಡಿಗೆ ಸುಮಾರು 3 ಲಕ್ಷ ರೂ. ಗಳವರೆಗೆ ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ.
0 Comments