ಮಂಗಳೂರು-ಕಾರ್ಕಳ KSRTC ಪ್ರಾಯೋಗಿಕ ಬಸ್ ಸಂಚಾರ

 ನಾಳೆಯಿಂದ  ಪ್ರಯಾಣಿಕರ ಬೇಡಿಕೆಗೆ ಅನುಗುಣ ವಾಗಿ ಮಂಗಳೂರು- ಕಾರ್ಕಳ ನಡುವೆ ಡಿ.12ರಿಂದ ಪ್ರಾಯೋಗಿಕವಾಗಿ ಬಸ್‌ ಸಂಚಾರ ನಡೆಸಲು ಕೆಎಸ್ಸಾರ್ಟಿಸಿ ತೀರ್ಮಾನಿಸಿದೆ.



ಜಿಲ್ಲಾಧಿಕಾರಿ, ಆರ್‌ಟಿಒ, ಕೆಎಸ್ಸಾರ್ಟಿಸಿ ಅಧಿಕಾರಿಗಳ ಜತೆ ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ ಸೋಜಾ ಕೆಲವು ದಿನಗಳ ಹಿಂದೆ ಚರ್ಚಿಸಿದ್ದರು. 

ಈ ಬಸ್‌ಗಳು ಮಂಗಳೂರಿನ ಬಿಜೈ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಿಂದ ನಂತೂರು, ಗುರುಪುರ, ಕೈಕಂಬ, ಮೂಡುಬಿದಿರೆ ಮೂಲಕ ಕಾರ್ಕಳಕ್ಕೆ ತೆರಳಲಿದೆ. ಮಂಗಳೂರು ಮತ್ತು ಕಾರ್ಕಳದಿಂದ ತಲಾ ಎರಡು ಬಸ್‌ಗಳು ಸಂಚರಿಸಲಿವೆ.

Post a Comment

0 Comments