ಇಸ್ರೋ ಮತ್ತೊಂದು ಸಾಧನೆ | SpaDeX ಮಿಷನ್ ಯಶಸ್ವಿ ಉಡಾವಣೆ

ಸ್ಪೇಡೆಕ್ಸ್‌-ಎ' ಹಾಗೂ ಸ್ಪೇಡೆಕ್ಸ್‌-ಬಿ' ಎಂಬ ಎರಡು ಉಪಗ್ರಹವನ್ನು ಹೊತ್ತೊಯ್ದಿರುವ ಪಿಎಸ್‌ಎಲ್‌ವಿ-ಸಿ60 ರಾಕೆಟ್ ನಿಗದಿತ ಕಕ್ಷೆಗೆ ಸೇರಿಸುವಲ್ಲಿ ಯಶಸ್ವಿಯಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಘೋಷಿಸಿದೆ.


ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದ ರೀತಿಯಲ್ಲೇ ಇಸ್ರೋ ಕೂಡ ತನ್ನದೇ ಆದ ಸ್ವದೇಶಿ ಭಾರತೀಯ ಅಂತರಿಕ್ಷ ನಿಲ್ದಾಣ ಸ್ಥಾಪಿಸಲು ಮುಂದಾಗಿದೆ. ಆ ನಿಲ್ದಾಣಕ್ಕೆ ಗಗನಯಾತ್ರಿಗಳು, ಉಪಕರಣಗಳನ್ನು ಕಳುಹಿಸಲು ಡಾಕಿಂಗ್‌, ಅನ್‌ಡಾಕಿಂಗ್‌ ಪರಿಣತಿಬೇಕು. ಒಂದು ವೇಳೆ ಈ ಯೋಜನೆ ಯಶಸ್ವಿಯಾದರೆ ಸ್ಪೇಸ್‌ ಡಾಕಿಂಗ್‌ ತಂತ್ರಜ್ಞಾನ ಹೊಂದಿದ ನಾಲ್ಕನೇ ದೇಶ ಎಂಬ ಖ್ಯಾತಿ ಪಡೆಯಲಿದೆ.


Post a Comment

0 Comments