ಗುಕೇಶ್ ಸೇರಿದಂತೆ 4 ಸಾಧಕರಿಗೆ ಈ ಬಾರಿ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ

ಎರಡು ಒಲಿಂಪಿಕ್ ಪದಕ ಗೆದ್ದು ಭಾರತಕ್ಕೆ ಕೀರ್ತಿ ತಂದಿದ್ದ ಶೂಟರ್ ಮನುಭಾಕರ್, ವಿಶ್ವ ಚೆಸ್ ಚಾಂಪಿಯನ್‌ಶಿಪ್ ಗೆದ್ದ ಕಿರಿಯ ಕ್ರೀಡಾಪಟು ಡಿ ಗುಕೇಶ್ ಸೇರಿದಂತೆ ನಾಲ್ವರು ಸಾಧಕರಿಗೆ ಈ ಬಾರಿ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಒಲಿದು ಬಂದಿದೆ. 

ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಗಳಲ್ಲಿ ಬಹುದೊಡ್ಡ ಪ್ರಶಸ್ತಿಯಾಗಿರುವ ಮೇಜರ್ ಧ್ಯಾನ್​ ಚಂದ್​ ಖೇಲ್​ ರತ್ನ ಪ್ರಶಸ್ತಿಯನ್ನ ಈ ಬಾರಿ 4 ಕ್ರೀಡಾಪಟುಗಳಿಗೆ ನೀಡಲಾಗುತ್ತಿದೆ. ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 2 ಚಿನ್ನ ಗೆದ್ದ ಶೂಟರ್ ಮನು ಭಾಕರ್, ಸತತ ಎರಡನೇ ಬಾರಿಗೆ ಕಂಚು ಗೆದ್ದ ಭಾರತ ಹಾಕಿ ತಂಡದ ನಾಯಕ ಹರ್ಮನ್​ಪ್ರೀತ್ ಸಿಂಗ್, ಪ್ಯಾರಾಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದ ಹೈಜಂಪರ್​ ಪ್ರವೀಣ್ ಕುಮಾರ್ ಹಾಗೂ ಕಳೆದ ತಿಂಗಳು ಚೆಸ್​ ವಿಶ್ವಚಾಂಪಿಯನ್​ಶಿಪ್​ ಗೆದ್ದ ಗುಕೇಶ್​ .ಡಿ ಅವರಿಗೆ ಖೇಲ್​ ರತ್ನ ಪ್ರಶಸ್ತಿಯನ್ನ ನೀಡಲಾಗುತ್ತಿದೆ.

2025 ರ ಜನವರಿ 17 ರಂದು ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ವಿಶೇಷವಾಗಿ ಆಯೋಜಿಸಲಾದ ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕೃತರು ಭಾರತದ ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ಕ್ರೀಡಾ ಸಚಿವಾಲಯ ಪತ್ರಿಕಾ ಪ್ರಕಟಣೆ ತಿಳಿಸಿದೆ.


Post a Comment

0 Comments