ರಾಕೆಟ್ ಮತ್ತು ಬಾಹ್ಯಾಕಾಶ ನೌಕೆಗಳ ಸಂಚಾಲನೆಯ ವಿಷಯ ಪರಿಣಿತರಾಗಿರುವ ನಾರಾಯಣನ್ ಅವರು ಸದ್ಯ ಕೇರಳದ ತಿರುವನಂತಪುರದಲ್ಲಿ ಕೇಂದ್ರ ಕಚೇರಿ ಹೊಂದಿರುವ ಇಸ್ರೊದ 'ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್'ನ (LPSC) ನಿರ್ದೇಶಕರಾಗಿ 2018ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ.
ರಾಕೆಟ್ ಮತ್ತು ಬಾಹ್ಯಾಕಾಶ ನೌಕೆಯ ಪ್ರೊಪಲ್ಷನ್‌ನಲ್ಲಿ ಸುಮಾರು ನಾಲ್ಕು ದಶಕಗಳ ಅನುಭವವನ್ನು ಹೊಂದಿರುವ ವಿಜ್ಞಾನಿ ನಾರಾಯಣನ್.ವಿ ನಾರಾಯಣನ್ ಅವರ ಸುದೀರ್ಘ ವೃತ್ತಿಜೀವನವು ಆದಿತ್ಯ ಬಾಹ್ಯಾಕಾಶ ನೌಕೆ ಮತ್ತು GSLV Mk-III ಮಿಷನ್‌ಗಳು ಸೇರಿದಂತೆ ಪ್ರಮುಖ ಇಸ್ರೋ ಯೋಜನೆಗಳಿಗೆ ಗಮನಾರ್ಹ ಕೊಡುಗೆಗಳನ್ನು ಒಳಗೊಂಡಿದೆ.
ಆಸ್ಟ್ರೋನಾಟಿಕಲ್ ಸೊಸೈಟಿ ಆಫ್ ಇಂಡಿಯಾದ ಶ್ರೀ ಪ್ರಶಸ್ತಿ ಮತ್ತು ಐಐಟಿ ಖರಗ್‌ಪುರದಿಂದ ಡಿಸ್ಟಿಂಗ್ವಿಶ್ಡ್ ಅಲುಮ್ನಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳೊಂದಿಗೆ ಅವರ ಸಾಧನೆಗಳನ್ನು ಗುರುತಿಸಲಾಗಿದೆ.
0 Comments